ಬೆಂಗಳೂರು: ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿಯಿಂದ ಸಿಹಿ ಸುದ್ದಿ ನೀಡಲಾಗಿದೆ. SSLC ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷಾ ದಿನಗಳಂದು ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸಮೀಪವೇ ಬಸ್ ನಿಲುಗಡೆ ಮಾಡಲು ಚಾಲಕರಿಗೆ ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ.