
ತುಮಕೂರು: ತುಮಕೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಾಧಿಕಾರಿಯನ್ನು ಕರ್ತವ್ಯ ಲೋಪ ಆರೋಪದಲ್ಲಿ ಅಮಾನತುಗೊಳಿಸಲಾಗಿದೆ.
ಶಿವಕುಮಾರ್ ಅಮಾನತುಗೊಂಡಿರುವ ಬಸ್ ನಿಲ್ದಾಣಾಧಿಕಾರಿ. ಶಿವಕುಮಾರ್ ವಿರುದ್ಧ ಕೆಳಹಂತದ ಸಿಬ್ಬಂದಿಗಳಿಗೆ ಕಿರುಕುಳ, ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್, ಶಿವಕುಮಾರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.