ಬೆಂಗಳೂರು: ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಆರಂಭವಾದ ಬೆನ್ನಲ್ಲೇ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೂಕ್ತ ಸಮಯದಲ್ಲಿ ಸರ್ಕಾರಿ ಬಸ್ ಗಳು ಸಿಗದೇ ಪರದಾಡುತ್ತಿದ್ದ ಹಾಗೂ ಬಸ್ ಸೇವೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಹಲವು ಪ್ರಕರಣಗಳು ರಾಜ್ಯದಲ್ಲಿ ಬೆಳಕಿಗೆ ಬಂದಿದೆ.
ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಹೆಚ್ಚಿನ ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ಕೆ.ಎಸ್.ಆರ್.ಟಿ.ಸಿಗೆ ಹಲವು ಬಾರಿ ಮನವಿ ಮಾಡಿದ್ದವು. ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಕೆ.ಎಸ್.ಆರ್.ಟಿ.ಸಿ 300ಕ್ಕೂ ಹೆಚ್ಚು ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಸೇವೆ ಆರಂಭಿಸಲು ಮುಂದಾಗಿದೆ.
ಶಾಲೆ-ಕಾಲೇಜುಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಸೇವೆ ಆರಂಭಿಸಲು ತೀರ್ಮಾನಿಸಿದೆ. ಕೆ.ಎಸ್.ಆರ್.ಟಿ.ಸಿಗೆ ಸೇರ್ಪದೆಯಾಗಿರುವ 814 ಬಸ್ ಗಳ ಪೈಕಿ 500 ಬಸ್ ಗಳನ್ನು ನಿಯೋಜಿಸಲು ನಿರ್ಧರಿಸಲಾಗಿದೆ.
ಇನ್ನು ಹೊಸ ಬಸ್ ಗಳ ಖರೀದಿಗೂ ಸರ್ಕಾರ ಮುಂದಾಗಿದ್ದು, ಹೊಸ ಮಾರ್ಗಗಳಲ್ಲಿ ಮುಂದಿನ ಮೂರು ತಿಂಗಳಲ್ಲಿ ಹೆಚ್ಚಿನ ಬಸ್ ಗಳ ಸೇವೆ ಕಲ್ಪಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.