ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಜುಲೈ 15 ರವರೆಗೆ ವಿಸ್ತರಿಸಲಾಗಿದೆ. ಕೆಎಸ್ಆರ್ಟಿಸಿ ಈ ಕುರಿತು ಆದೇಶ ಹೊರಡಿಸಿದೆ.
ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಇನ್ನೂ ಬಸ್ ಪಾಸ್ ವಿತರಿಸಿಲ್ಲ. ಹೀಗಾಗಿ ಕಳೆದ ವರ್ಷ ಪಡೆದ ಬಸ್ ಪಾಸ್ ತೋರಿಸಿ ಜುಲೈ 15ರವರೆಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಸಾಮಾನ್ಯ ಸೇವೆ ಬಸ್ ಗಳಲ್ಲಿ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಶಾಲೆ, ಕಾಲೇಜಿನ ಶುಲ್ಕ ರಶೀದಿ, ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದು ಎಂದು ಹೇಳಲಾಗಿದೆ.