ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಶೇಕಡ 15 ರಿಂದ 20 ರಷ್ಟು ಏರಿಕೆಗೆ ಸಾರಿಗೆ ನಿಗಮಗಳಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.
ಶಕ್ತಿ ಯೋಜನೆ ಜಾರಿಯಾದ ಬಳಿಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಆದಾಯ ಹೆಚ್ಚಾಗಿದೆ. ಆದರೆ, ಸಿಬ್ಬಂದಿ ವೇತನ, ಡೀಸೆಲ್, ಬಿಡಿ ಭಾಗಗಳ ಬೆಲೆ ಹೆಚ್ಚಳದಿಂದ ನಿಗಮಗಳು ಆರ್ಥಿಕವಾಗಿ ಸದೃಢವಾಗಿಲ್ಲ. ಹೀಗಾಗಿ ಶೇಕಡ 15 ರಿಂದ 20 ರಷ್ಟು ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗೆ ಅನುಮೋದನೆ ನೀಡುವ ಹೊಣೆಯನ್ನು ಸಿಎಂಗೆ ಬಿಡಲಾಗಿದೆ. ಈಗಾಗಲೇ ಪ್ರಸ್ತಾವನೆ ಬಗ್ಗೆ ಸಿಎಂ ಗಮನಕ್ಕೆ ತರಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಸಿಎಂ ಸಭೆ ನಡೆಸಿ ದರ ಹೆಚ್ಚಳ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.