alex Certify BIG NEWS: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ: ಮಹಿಳೆ ದುರ್ಮರಣ; 20 ಪ್ರಯಾಣಿಕರಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ: ಮಹಿಳೆ ದುರ್ಮರಣ; 20 ಪ್ರಯಾಣಿಕರಿಗೆ ಗಂಭೀರ ಗಾಯ

ವಿಜಯನಗರ: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿ ಬಿದ್ದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಸುತ್ತೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.

ಘಟನೆಯಲ್ಲಿ ಬಸ್ ನಲ್ಲಿದ್ದ ಮಹಿಳೆ ಹನುಮಕ್ಕ (45) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ದಾವಣಗೆರೆಯಿಂದ ಹರಪನಹಳ್ಳಿ ಕಡೆ ಹೊರಟಿತ್ತು ಎಂದು ತಿಳಿದುಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...