alex Certify KSRTC ಬಸ್ – ಬೈಕ್ ಡಿಕ್ಕಿ; ಹಿಂಬದಿ ಕುಳಿತಿದ್ದ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KSRTC ಬಸ್ – ಬೈಕ್ ಡಿಕ್ಕಿ; ಹಿಂಬದಿ ಕುಳಿತಿದ್ದ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಗೆ ಮತ್ತೋರ್ವ ಬೈಕ್ ಸವಾರ ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ.

ವೆಂಕಟಗಿರಿಕೋಟೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿ ಹಿಂಬದಿ ಕುಳಿತಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವಡಿವೇಲು (45) ಮೃತ ವ್ಯಕ್ತಿ. ಬೈಕ್ ಓಡಿಸುತ್ತಿದ್ದ ಮಧು ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೈಕ್ ಸವಾರರು ನಂದಿ ಬೆಟ್ಟಕ್ಕೆಂದು ಹೋಗುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ.

ದೇವನಹಳ್ಳಿಯ ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...