
ಕಾರವಾರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.
ಶಿರಸಿ ತಾಲೂಕಿನ ಬಂಡಲ್ ಬಳಿ ಈ ದುರಂತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಮೃತರು ತಮಿಳುನಾಡಿನ ಮೂಲದವರೆಂದು ತಿಳಿದುಬಂದಿದೆ.
ಅಪಘಾತ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.