alex Certify BIG NEWS: KSRTC ಬಸ್-ಕಾರು ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: KSRTC ಬಸ್-ಕಾರು ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ನಡೆದಿದೆ.

ಪೂಜಾ ಹಿರೇಮಠ ಹಾಗೂ ರಾಜಶೇಖರ ಮೃತ ತಾಯಿ-ಮಗ. ಗಾಯಾಳು ಶಿವಯಾಗಯ್ಯ ಅವರನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಧರ್ಮಸ್ಥಳದಿಂದ ಮೂಡಿಗೆರೆ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಕಾರು, ಸಕಲೇಶಪುರದಿಂದ ಮೂಡಿಗೆರೆ ಕಡೆ ತೆರಳುತ್ತಿದ್ದ ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...