alex Certify BIG NEWS: ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ; ಗಾಯಗೊಂಡಿದ್ದ ಇಬ್ಬರು ಪ್ರಯಾಣಿಕರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ; ಗಾಯಗೊಂಡಿದ್ದ ಇಬ್ಬರು ಪ್ರಯಾಣಿಕರು ಸಾವು

ಬಳ್ಳಾರಿ: ನಿಂತಿದ್ದ ಲಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಗಾಯಾಳುಗಳಾದ ಸುದೀಪ್ (18) ಹಾಗೂ ರಾಮಪ್ಪ (60) ಮೃತರು. ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ನಿನ್ನೆ ರಾತ್ರಿ ಕೆ.ಎಸ್.ಆರ್.ಟಿ.ಸಿ ಬಸ್ ರಾಯಚೂರಿನ ಸಿಂಧನೂರು ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ 20 ಜನರು ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಐವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಇಬ್ಬರು ಪ್ರಯಾಣಿಕರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...