alex Certify ಎಣ್ಣೆ ಮತ್ತಿನಲ್ಲಿ ಯುವಕರ ಪುಂಡಾಟ : `KSRTC’ ಬಸ್ ನ ಗ್ಲಾಸ್ ಒಡೆದು, ಚಾಲಕನ ಮೇಲೆ ಹಲ್ಲೆ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಣ್ಣೆ ಮತ್ತಿನಲ್ಲಿ ಯುವಕರ ಪುಂಡಾಟ : `KSRTC’ ಬಸ್ ನ ಗ್ಲಾಸ್ ಒಡೆದು, ಚಾಲಕನ ಮೇಲೆ ಹಲ್ಲೆ!

ಚಿಕ್ಕಮಗಳೂರು : ಚಿಕ್ಕಮಗಳುರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಲ್ಲಿ ಕುಡಿದ ಮತ್ತಿನಲ್ಲಿ ಯುವಕರು ಪುಂಡಾಟ ಮೆರೆದಿದ್ದು, ಕೆಎಸ್ ಆರ್ ಟಿಸಿ ಬಸ್ ನ ಗ್ಲಾಸ್ ಒಡೆದು,ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಬೀರೂರು ಸಮೀಪದ ‌ಹೋರಿತಿಮ್ಮನಹಳ್ಳಿ ಗೇಟ್ ಬಳಿ ಕಡೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸಿನ ಮುಂಭಾಗದಲ್ಲಿ ಚಲಿಸುತ್ತಿದ್ದ ಕಾರಿನಿಂದ ಯುವಕರು ಗಾಜಿನ ಮದ್ಯದ ಬಾಟಲಿಯನ್ನ ಎಸೆದಿದ್ದಾರೆ. ಇದು ಬಸ್ಸಿನ ಮುಂಭಾಗದ ಗ್ಲಾಸಿಗೆ ತಗುಲಿ ಗಾಜು ಪುಡಿಯಾಗಿದೆ. ಈ ವೇಳೆ  ಚಾಲಕ ಸತೀಶ್ ಕೇಳು ಹೋಗಿದ್ದಕ್ಕೆ ಕೋಪಗೊಂಡ ಯುವಕರು ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ.

ಹಲ್ಲೆಗೊಳಗಾದ ಚಾಲಕ ಸತೀಶ್ ಅವರನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಪುಂಡಾಟ ಮೆರೆದ ಕಿರಣ್, ಸತೀಶ್, ಸಚಿನ್, ಸುಪ್ರೀತ್ ಎಂಬುವವರನ್ನ ಬಂಧಿಸಲಾಗಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...