ಬೆಂಗಳೂರು: ಬಸ್ ಪ್ರಯಾಣದರ ಹೆಚ್ಚಳ ಕುರಿತಾಗಿ ಯಾವುದೇ ತೀರ್ಮಾನವನ್ನು ಇನ್ನೂ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನೀರಿನ ದರ ಅನೇಕ ವರ್ಷಗಳಿಂದ ಏರಿಕೆ ಮಾಡಿಲ್ಲ. ಜಲಮಂಡಳಿಯಲ್ಲಿ ಕಷ್ಟದ ಪರಿಸ್ಥಿತಿ ಇದ್ದು, ನೀರಿನ ದರ ಹೆಚ್ಚಳದ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬಸ್ ಪ್ರಯಾಣ ದರಗಳನ್ನು ಹೆಚ್ಚಿಸುವ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಸಿಎಂ ಮಾಹಿತಿ ನೀಡಿದ್ದಾರೆ.