ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಮಾಚೇನಹಳ್ಳಿ ಸಮೀಪ ಕೆಎಸ್ಆರ್ಟಿಸಿ ಬಸ್ ಹತ್ತುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ರಾಜೇಶ್ವರಿ ಮೃತಪಟ್ಟ ಮಹಿಳೆ ಎನ್ನಲಾಗಿದೆ. ಶಿವಮೊಗ್ಗ -ಭದ್ರಾವತಿ ನಡುವೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಒಂದೇ ಬದಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಭದ್ರಾವತಿಯ ರಾಜೇಶ್ವರಿ ಮಾಚೇನಹಳ್ಳಿಗೆ ಕೆಲಸಕ್ಕೆ ಹೋಗಿ ಬರುವಾಗ ಬಸ್ ಹತ್ತಲು ಮುಂದಾಗಿದ್ದಾರೆ. ಹೆಚ್ಚಿನ ಜನರಿದ್ದ ಕಾರಣ ಬಸ್ ಹೊರಡುವ ವೇಳೆ ಅವರು ಆಯತಪ್ಪಿ ಕೆಳಗೆ ಬಿದ್ದಿದ್ದು, ಬಾಯಿ ಮತ್ತು ಕಿವಿಯಲ್ಲಿ ರಕ್ತಸ್ರಾವವಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಈ ವೇಳೆಗಾಗಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.