
ಯಾದಗಿರಿ: ಬಿಜೆಪಿ ಪರ ಚುನಾವಣೆ ಪ್ರಚಾರ ನಡೆಸಿದ ಕೆಎಸ್ಆರ್ಟಿಸಿ ಬಸ್ ಚಾಲಕ ಕಂ ನಿರ್ವಾಹಕನನ್ನು ಅಮಾನತು ಮಾಡಲಾಗಿದೆ.
ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜುಗೌಡ ಪರವಾಗಿ ಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕ ಸೂರ್ಯಪ್ರಕಾಶ್ ಭಾಗವಹಿಸಿದ್ದರು. ಸುರಪುರ ವಿಭಾಗದ ಸೂರ್ಯಪ್ರಕಾಶ್ ಬಿಜೆಪಿ ಪರ ಪ್ರಚಾರದಲ್ಲಿ ಭಾಗವಹಿಸಿದ್ದ ಫೋಟೋ ವೈರಲ್ ಆಗುತ್ತಿದ್ದಂತೆ ಯಾದಗಿರಿ ಕೆಎಸ್ಆರ್ಟಿಸಿ ವಿಭಾಗಿಯ ನಿಯಂತ್ರಣಾಧಿಕಾರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.