ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಜಾರಿಗೊಳಿಸಿದ್ದು, ಯೋಜನೆಯ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ಬದಲಿಗೆ ಸಾಮಾನ್ಯ ಬಸ್ ಪಾಸ್ ನೀಡಲು ಸಾರಿಗೆ ನಿಗಮಗಳು ತೀರ್ಮಾನಿಸಿದೆ.
ಶಕ್ತಿ ಯೋಜನೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಕೆಲವು ಮಹಿಳೆಯರಿಗೆ ಸಾಂಕೇತಿಕವಾಗಿ ಸ್ಮಾರ್ಟ್ ಕಾರ್ಡ್ ನೀಡಲಾಗಿತ್ತು. ನಂತರ ಯೋಜನೆಗೆ ಅರ್ಜಿ ಸಲ್ಲಿಸಿದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡುವುದಾಗಿ ಸರ್ಕಾರ ತಿಳಿಸಿದ್ದು, ಈಗ ಮಹಿಳಾ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ಬದಲಿಗೆ ಸಾಮಾನ್ಯ ಬಸ್ ಗಳ ಮಾದರಿಯ ಶಕ್ತಿ ಯೋಜನೆ ಪಾಸ್ ಗಳನ್ನು ನೀಡಲು ಸಾರಿಗೆ ನಿಗಮಗಳು ನಿರ್ಧರಿಸಿವೆ.
ಜೂನ್ 11 ರಂದು ಶಕ್ತಿ ಯೋಜನೆ ಜಾರಿಯಾಗಿದ್ದು, ಎರಡು ತಿಂಗಳು ಪೂರ್ಣಗೊಂಡಿದೆ. ಆಗಸ್ಟ್ 10ರವರೆಗೆ 36.82 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಟಿಕೆಟ್ ಮೌಲ್ಯ 854.44 ಕೋಟಿ ರೂ. ಆಗಿದೆ.