ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ರಾಜ್ಯ ಸರ್ಕಾರದಿಂದ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಿಗೆ 70.51 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
ಶಕ್ತಿ ಯೋಜನೆಯಡಿ ಮಹಿಳೆಯರು ಬಸ್ ಗಳಲ್ಲಿ ಜೂನ್ ತಿಂಗಳಲ್ಲಿ ಉಚಿತವಾಗಿ ಪ್ರಯಾಣಿಸಿದ ವೆಚ್ಚದ ಮರುಪಾವತಿಗೆ ಬಜೆಟ್ ನಲ್ಲಿ ನಿಗದಿಪಡಿಸಿದ ಅನುದಾನದಲ್ಲಿ 4 ಸಾರಿಗೆ ಸಂಸ್ಥೆಗಳಿಗೆ ಹಣ ಬಿಡುಗಡೆ ಮಾಡಲಾಗಿದೆ.
ಶಕ್ತಿ ಯೋಜನೆ ಅಡಿಯ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದ ನಿಟ್ಟಿನಲ್ಲಿ 250.96 ಕೋಟಿ ರೂ. ಬಿಡುಗಡೆ ಮಾಡುವಂತೆ ಕೋರಲಾಗಿತ್ತು. ಪ್ರಸ್ತಾವನೆಗೆ ಪೂರಕವಾಗಿ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 26.49 ಕೋಟಿ ರೂ., ಬಿಎಂಟಿಸಿಗೆ 12.27 ಕೋಟಿ ರೂ., ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ 18.30 ಕೋಟಿ ರೂ., ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ 13.43 ಕೋಟಿ ರೂ. ಸೇರಿ 70.51 ಕೋಟಿ ರೂ ಬಿಡುಗಡೆ ಮಾಡಲಾಗಿದೆ.
ಕಳೆದ ವಾರ 125 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಒಟ್ಟಾರೆ 250 ಕೋಟಿ ರೂ. ನಲ್ಲಿ ಇದುವರೆಗೆ 195 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಜೂನ್ ತಿಂಗಳ ಬಾಕಿ ಇನ್ನೂ 55 ಕೋಟಿ ರೂ. ಬಿಡುಗಡೆ ಮಾಡಬೇಕಿದೆ.