ಬಾಗಲಕೋಟೆ: ಕೊರೋನಾ ಸಂದರ್ಭದಲ್ಲಿ ಅಗತ್ಯ ವಸ್ತುಗಳು, ಪೆಟ್ರೋಲ್, ಡೀಸೆಲ್, ವಿದ್ಯುತ್ ದರ ಏರಿಕೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದೆ.
ಸಾರಿಗೆ ದರ ಏರಿಕೆ ಬಿಸಿ ತಟ್ಟುವ ಸಾಧ್ಯತೆ ಇದೆ. ಶೇಕಡ 10 ರಿಂದ 15 ರಷ್ಟು ಬಸ್ ಪ್ರಯಾಣ ದರ ಏರಿಕೆ ಮಾಡುವ ಸಾಧ್ಯತೆ ಇದೆ. ಲಾಕ್ ಡೌನ್ ಮುಗಿದ ನಂತರ ಸರ್ಕಾರ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸಮ್ಮತಿ ಸೂಚಿಸಬಹುದು.
ಲಾಕ್ ಡೌನ್ ಜಾರಿಯಾಗಿರುವುದರಿಂದ ಸಾರಿಗೆ ಸಂಸ್ಥೆ ಬಸ್ ಗಳು ಸಂಚರಿಸದೇ ನಷ್ಟದಲ್ಲಿವೆ. ಇದನ್ನು ಪರಾಮರ್ಶಿಸಿ ರಾಜ್ಯದಲ್ಲಿ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಬೇಕಾಗುತ್ತದೆ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಹೇಳಿದ್ದಾರೆ.
ಈ ಹಿಂದೆ ಶೇಕಡ 10ರಷ್ಟು ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಅನುಮತಿ ನೀಡಿದ್ದು, ಈಗಿನ ಪರಿಸ್ಥಿತಿ ಗಮನಿಸಿದರೆ ಶೇಕಡ 50 ರಷ್ಟು ಪ್ರಯಾಣದರ ಹೆಚ್ಚಳ ಮಾಡಬೇಕಾಗುತ್ತದೆ. ಆದರೆ, ಜನತೆಗೆ ಹೊರೆಯಾಗುತ್ತದೆ. ಹೀಗಾಗಿ ಶೇಕಡ 10 ರಿಂದ 15 ರಷ್ಟು ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಗುವುದು ಎಂದು ಹೇಳಿದ್ದಾರೆ.