ಬೆಂಗಳೂರು: ಲಾಭ, ನಷ್ಟ ಪರಿಗಣಿಸದೇ ಅಗತ್ಯವಿರುವ ಕಡೆಗಳಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಸೌಲಭ್ಯ ಕಲ್ಪಿಸಲಾಗುವುದು. ಅಕ್ಟೋಬರ್ ನಲ್ಲಿ ಸಾಲು-ಸಾಲು ರಜೆ ಸರಣಿ ಹಬ್ಬಗಳಿಗೆ ಹೆಚ್ಚುವರಿ ಬಸ್ ಗಳನ್ನು ಓಡಿಸಲು ಕೆಎಸ್ಆರ್ಟಿಸಿ ಸಿದ್ಧತೆ ಕೈಗೊಂಡಿದೆ.
ಅಕ್ಟೋಬರ್ ನಲ್ಲಿ ಸಾಲು-ಸಾಲು ರಜೆ ಹಬ್ಬಗಳಿಂದಾಗಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದೆ. ಊರುಗಳಿಗೆ, ಪ್ರವಾಸಕ್ಕೆ ತೆರಳುವವರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಲಾಗುವುದು. ಗಾಂಧಿಜಯಂತಿ, ಮಹಾಲಯ ಅಮಾವಾಸ್ಯೆ, ದಸರಾ, ಮಹಾನವಮಿ, ಆಯುಧಪೂಜೆ, ವಾಲ್ಮೀಕಿ ಜಯಂತಿ ಇರುವುದರಿಂದ ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದ್ದು ಹೆಚ್ಚುವರಿ ಬಸ್ ಕಾರ್ಯಾಚರಣೆಗೆ ವ್ಯವಸ್ಥೆ ಮಾಡಲಾಗಿದೆ.
ಚಿತ್ರದುರ್ಗದಲ್ಲಿ ಮಾತನಾಡಿದ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು, ಲಾಭ-ನಷ್ಟವನ್ನು ಪರಿಗಣಿಸದೆ ಅಗತ್ಯವಿರುವ ಕಡೆಗಳಲ್ಲಿ ಕೆಎಸ್ಆರ್ಟಿಸಿ ಬಸ್ ಸೇವೆ ಒದಗಿಸಲಾಗುವುದು ಎಂದು ಹೇಳಿದ್ದಾರೆ
ಮುಷ್ಕರದ ಸಂದರ್ಭದಲ್ಲಿ ವರ್ಗಾವಣೆ, ವಜಾ ಮತ್ತು ಅಮಾನತುಗೊಂಡ ಕೆಎಸ್ಆರ್ಟಿಸಿ ನೌಕರರಿಗೆ ಅವರಿದ್ದ ಸ್ಥಳದಲ್ಲಿ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಲು ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.