alex Certify KSRTC ಡಿವಿಜನಲ್ ಸೆಕ್ಯುರಿಟಿ ಇನ್ಸ್ ಪೆಕ್ಟರ್ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KSRTC ಡಿವಿಜನಲ್ ಸೆಕ್ಯುರಿಟಿ ಇನ್ಸ್ ಪೆಕ್ಟರ್ ಬರ್ಬರ ಹತ್ಯೆ

ಬಳ್ಳಾರಿ: ಕೆ.ಎಸ್.ಆರ್.ಟಿ.ಸಿ ಡಿವಿಜನಲ್ ಸೆಕ್ಯುರಿಟಿ ಇನ್ಸ್ ಪೆಕ್ಟರ್ ನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಳ್ಳಾರಿ ನಗರದಲ್ಲಿ ನಡೆದಿದೆ.

54 ವರ್ಷದ ಹುಸೇನಪ್ಪ ಕೊಲೆಯಾದ ಸೆಕ್ಯುರಿಟಿ ಇನ್ಸ್ ಪೆಕ್ಟರ್. ದುಷ್ಕರ್ಮಿಗಳು ಬೈಕ್ ನಲ್ಲಿ ಬಂದು ಮಾರಕಾಸ್ತ್ರಗಳಿಂದ ಹುಸೇನಪ್ಪ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಹುಸೇನಪ್ಪ ಸಾವನ್ನಪ್ಪಿದ್ದಾರೆ.

ಹುಸೇನಪ್ಪ ಕಳೆದ 20 ವರ್ಷಗಳಿಂದ ಕೆ.ಎಸ್.ಆರ್.ಟಿ.ಸಿಯಲ್ಲಿ ಕರ್ತವ್ಯನಿರ್ವಹಿಸುತ್ತಿದ್ದರು.ಬೀದರ್ ನಲ್ಲಿ ನಡೆಯುತ್ತಿದ್ದ ಚಾಲಕರ ನೇಮಕಾತಿ ಪರೀಕ್ಷೆಗೆ ತೆರಳುವವರಿದ್ದರು. ಮನೆಯಿಂದ ಬಸ್ ನಿಲ್ದಾಣಕ್ಕೆ ಹೋಗುವ ವೇಳೆ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

ಸ್ಥಳಕ್ಕೆ ಎಸ್ ಪಿ ರಂಜಿತ್ ಕುಮಾರ್, ಕೆ.ಎಸ್.ಆರ್.ಟಿ.ಸಿ ಡಿಸಿ ದೇವರಾಜ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...