
ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಕೆಎಸ್ಆರ್ಟಿಸಿ ಪ್ರವಾಸಿಗರಿಗೆ ವಿಶೇಷ ಪ್ಯಾಕೇಜ್ ಪ್ರಕಟಿಸಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ವಾರಾಂತ್ಯದ ದಿನಗಳಲ್ಲಿ ಬೆಂಗಳೂರು -ಜೋಗ ಜಲಪಾತ ಪ್ಯಾಕೇಜ್ ಟೂರ್ ಆಯೋಜಿಸಲಾಗಿದೆ.
ಜುಲೈ 23 ರಿಂದ ನಾನ್ ಎಸಿ ಸ್ಲೀಪರ್ ಬಸ್ ನಲ್ಲಿ ಪ್ಯಾಕೇಜ್ ಟೂರ್ ಆರಂಭವಾಗಲಿದೆ. ಶುಕ್ರವಾರ, ಶನಿವಾರ ಮಾತ್ರ ಟೂರ್ ಇರಲಿದೆ. ವಯಸ್ಕರಿಗೆ 1900 ರೂ., 6 ರಿಂದ 12 ವರ್ಷದ ಮಕ್ಕಳಿಗೆ 1700 ರೂಪಾಯಿ ದರ ನಿಗದಿಗೊಳಿಸಲಾಗಿದೆ.