
ಬೆಳಗಾವಿ: ಇಂಧನ ದರ ಭಾರಿ ಏರಿಕೆಯ ಕಾರಣ ಬಸ್ ಪ್ರಯಾಣ ದರ ಏರಿಕೆ ಮಾಡಬಹುದೆಂದು ಹೇಳಲಾಗಿತ್ತು. ಆದರೆ, ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು, ಸದ್ಯ ಬಸ್ ಪ್ರಯಾಣ ದರ ಏರಿಕೆ ಇಲ್ಲ ಎಂದು ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆ ಅಥಣಿ ಸಮೀಪ ಕೈಗಾರಿಕಾ ವಸಾಹತು ಪ್ರದೇಶದಲ್ಲಿ 7.5 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ವಯಂ ಚಾಲಿತ ವಾಹನ ಪರೀಕ್ಷಾ ಪಥ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಸದ್ಯಕ್ಕೆ ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ. ಕೊರೋನಾ ಸೋಂಕಿನಿಂದ ಮೃತಪಟ್ಟ ಸಾರಿಗೆ ನೌಕರರ ಕುಟುಂಬಗಳಿಗೆ ಹಂತ ಹಂತವಾಗಿ 30 ಲಕ್ಷ ರೂ. ಪರಿಹಾರಧನ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.