alex Certify ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸದ್ಯ ಪ್ರಯಾಣ ದರ ಏರಿಕೆ ಇಲ್ಲ; ಡಿಸಿಎಂ ಸವದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸದ್ಯ ಪ್ರಯಾಣ ದರ ಏರಿಕೆ ಇಲ್ಲ; ಡಿಸಿಎಂ ಸವದಿ

ಬೆಳಗಾವಿ: ಇಂಧನ ದರ ಭಾರಿ ಏರಿಕೆಯ ಕಾರಣ ಬಸ್ ಪ್ರಯಾಣ ದರ ಏರಿಕೆ ಮಾಡಬಹುದೆಂದು ಹೇಳಲಾಗಿತ್ತು. ಆದರೆ, ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು, ಸದ್ಯ ಬಸ್ ಪ್ರಯಾಣ ದರ ಏರಿಕೆ ಇಲ್ಲ ಎಂದು ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆ ಅಥಣಿ ಸಮೀಪ ಕೈಗಾರಿಕಾ ವಸಾಹತು ಪ್ರದೇಶದಲ್ಲಿ 7.5 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ವಯಂ ಚಾಲಿತ ವಾಹನ ಪರೀಕ್ಷಾ ಪಥ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಸದ್ಯಕ್ಕೆ ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ. ಕೊರೋನಾ ಸೋಂಕಿನಿಂದ ಮೃತಪಟ್ಟ ಸಾರಿಗೆ ನೌಕರರ ಕುಟುಂಬಗಳಿಗೆ ಹಂತ ಹಂತವಾಗಿ 30 ಲಕ್ಷ ರೂ. ಪರಿಹಾರಧನ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...