
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಲ್ಲಿಯೇ ಪ್ರಯಾಣಿಕನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶನಿವಾರ ರಾತ್ರಿ ನಡೆದಿದೆ.
ಸಾಗರ ತಾಲೂಕು ಗಂಗಾಧರ ಮಂಜುನಾಥ ವಸಂತೆ(35) ಮೃತಪಟ್ಟವರು. ಪ್ರೀತಮ್ ಡಿಸೋಜಾ ಕೊಲೆ ಆರೋಪಿಯಾಗಿದ್ದಾನೆ. ಕೊಲೆ ಮಾಡಿದ ಬಳಿಕ ಚಲಿಸುತ್ತಿದ್ದ ಬಸ್ ನಿಂದ ಇಳಿದು ಆರೋಪಿ ಪರಾರಿಯಾಗಿದ್ದಾನೆ.
ಅಂಕೋಲಾದಿಂದ ಶಿರಸಿ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ ಗಂಗಾಧರ ಪತ್ನಿಯ ಜೊತೆಗೆ ಪ್ರಯಾಣಿಸುತ್ತಿದ್ದರು. ಆರೋಪಿ ಪ್ರೀತಮ್ ಡಿಸೋಜಾ ಕೂಡ ಅದೇ ಬಸ್ ನಲ್ಲಿದ್ದ. ಶಿರಸಿಯ ಹೊಸ ಬಸ್ ನಿಲ್ದಾಣದಿಂದ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಬಸ್ ತೆರಳುವಾಗ ಗಂಗಾಧರನ ಜೊತೆಗೆ ಜಗಳವಾಡಿ ಎದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಬಸ್ ಚಾಲಕ ಆಸ್ಪತ್ರೆಗೆ ಕರೆದೊಯ್ದರೂ ಗಂಗಾಧರನನ್ನು ಉಳಿಸಲು ಸಾಧ್ಯವಾಗಿಲ್ಲ. ಶಿರಸಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.