ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಬಸ್ ಪಾಸ್ ನೀಡಲಾಗುತ್ತಿದೆ. ಇತರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೂ ಕೂಡ ಇದನ್ನು ವಿಸ್ತರಿಸಬೇಕೆಂಬ ಬೇಡಿಕೆ ಇದೆ.
ವಿಧಾನಪರಿಷತ್ ನಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡುವ ಕುರಿತಂತೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಭರವಸೆ ನೀಡಿದ್ದಾರೆ. ಒಬಿಸಿ ವಿದ್ಯಾರ್ಥಿಗಳಿಗೆ ಬಸ್ ಉಚಿತ ಬಸ್ ಪಾಸ್ ವಿತರಿಸುವ ಬಗ್ಗೆ ಸಿಎಂ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಪರೀಕ್ಷೆಗೆ ಉಚಿತ ಪ್ರಯಾಣ
ಸೆಪ್ಟೆಂಬರ್ 27, 29 ರಂದು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು KSRTC ಅವಕಾಶ ಕಲ್ಪಿಸಿದೆ. ಪರೀಕ್ಷೆ ಪ್ರವೇಶ ಪತ್ರ ತೋರಿಸಿ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.