alex Certify ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಜ. 5ರಿಂದ ಸಾರಿಗೆ ಬಸ್ ಟಿಕೆಟ್ ಪರಿಷ್ಕೃತ ದರ ಜಾರಿ, ಖಾಸಗಿ ಬಸ್ ಟಿಕೆಟ್ ದರವೂ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಜ. 5ರಿಂದ ಸಾರಿಗೆ ಬಸ್ ಟಿಕೆಟ್ ಪರಿಷ್ಕೃತ ದರ ಜಾರಿ, ಖಾಸಗಿ ಬಸ್ ಟಿಕೆಟ್ ದರವೂ ಹೆಚ್ಚಳ

ಬೆಂಗಳೂರು: ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಪ್ರಯಾಣ ದರವನ್ನು ಶೇಕಡ 15ರಷ್ಟು ಏರಿಕೆ ಮಾಡಲಾಗಿದೆ. ಜನವರಿ 5 ರಿಂದ ಪರಿಷ್ಕೃತ ಟಿಕೇಟ್ ದರ ಜಾರಿಗೆ ಬರಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಶೇಕಡ 15ರಷ್ಟು ಬಸ್ ಟಿಕೆಟ್ ದರ ಹೆಚ್ಚಳಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಕಳೆದ 5-10 ವರ್ಷಗಳಿಂದ ಟಿಕೆಟ್ ದರ ಹೆಚ್ಚಳ ಮಾಡಿರಲಿಲ್ಲ. ಡೀಸೆಲ್ ದರ ಹೆಚ್ಚಳ, ಸಿಬ್ಬಂದಿ ವೇತನ ಏರಿಕೆ, ಬಿಡಿ ಭಾಗಗಳ ದರ ಹೆಚ್ಚಳದಿಂದಾಗಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ. ಜನವರಿ 5 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

ಇನ್ನು ಸಾರಿಗೆ ಬಸ್ ಗಳ ದರ ಏರಿಕೆಯಾಗುತ್ತಿದ್ದಂತೆ ಖಾಸಗಿ ಬಸ್ ಗಳಲ್ಲಿಯೂ ಪ್ರಯಾಣ ದರ ಏರಿಕೆ ಮಾಡಲು ಖಾಸಗಿ ಬಸ್ ಗಳ ಮಾಲೀಕರು ಚಿಂತನೆ ನಡೆಸಿದ್ದಾರೆ. ಖಾಸಗಿ ಬಸ್ ಮಾಲೀಕರು ಕೂಡ ಶೇಕಡ 15ರಷ್ಟು ಟಿಕೆಟ್ ಚರ್ಚೆ ನಡೆಸಿದ್ದು, ಶೀಘ್ರವೇ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...