ಬೆಂಗಳೂರು: ಸದ್ಯಕ್ಕೆ ಬಸ್ ಟಿಕೆಟ್ ದರ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜು ಕಾಗೆ ಅವರ ಹೇಳಿಕೆ ವೈಯಕ್ತಿಕವಾಗಿದೆ. ಪ್ರಯಾಣ ದರ ಏರಿಕೆ ಮಾಡುತ್ತಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ರಾಜು ಕಾಗೆ ಅವರು ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಸಾರಿಗೆ ಇಲಾಖೆಯಲ್ಲಿ ಟಿಕೆಟ್ ದರ ಹೆಚ್ಚಳದಂತಹ ಪ್ರಸ್ತಾವನೆ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.