ಬೆಂಗಳೂರು: ಚಾಲಕರ ಕೊರತೆ ಹಿನ್ನಲೆಯಲ್ಲಿ ಕೆಎಸ್ಆರ್ಟಿಸಿ 2 ಸಾವಿರಕ್ಕೂ ಹೆಚ್ಚಿನ ಚಾಲಕರು ಕಂ ನಿರ್ವಾಹಕರ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಇದರೊಂದಿಗೆ ಹೊರಗುತ್ತಿಗೆ ಆಧಾರದಲ್ಲಿ ಚಾಲಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗಿದೆ.
ಕೆಎಸ್‌ಆರ್‌ಟಿಸಿಯಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆಯದ ಕಾರಣ ಚಾಲಕರ ಕೊರತೆ ಎದುರಾಗಿದೆ. ಹೀಗಾಗಿ ಕಳೆದ ವರ್ಷ 1,700 ಚಾಲಕರನ್ನು ಹೊರಗುತ್ತಿಗೆ ಆಧಾರದ ಮೇಲೆ ಮಾಡಿಕೊಳ್ಳಲಾಗಿತ್ತು. ಈಗ 2200 ಚಾಲಕರು ಕಂ ನಿರ್ವಾಹಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿ ಅಂತಿಮ ಹಂತದಲ್ಲಿದ್ದು, ಹೊಸದಾಗಿ 1,260 ವರ್ಷ ಚಾಲಕರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಕೆಎಸ್ಆರ್ಟಿಸಿ ಕ್ರಮಕೈಗೊಂಡಿದೆ ಎನ್ನಲಾಗಿದೆ.