alex Certify ಶುಭ ಸುದ್ದಿ: KSRTC ಯಲ್ಲಿ 4600ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಸರ್ಕಾರದ ಅನುಮತಿ ಕೋರಿ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: KSRTC ಯಲ್ಲಿ 4600ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಸರ್ಕಾರದ ಅನುಮತಿ ಕೋರಿ ಮನವಿ

ಬೆಂಗಳೂರು: ಕೆಎಸ್ಆರ್ಟಿಸಿಯಲ್ಲಿ ಖಾಲಿ ಇರುವ ಸುಮಾರು 4600 ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಮರು ಚಾಲನೆ ನೀಡಲು ಸರ್ಕಾರದ ಅನುಮತಿ ಕೋರಲಾಗಿದೆ.

KSRTC ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಈ ಬಗ್ಗೆ ಮಾಹಿತಿ ನೀಡಿ, ಅನುಮತಿ ದೊರೆತ ನಂತರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಕೆಎಸ್ಆರ್ಟಿಸಿ ಘಟಕಗಳಲ್ಲಿ ಖಾಲಿ ಇರುವ 3745 ಚಾಲನಾ ಸಿಬ್ಬಂದಿ, 726 ತಾಂತ್ರಿಕ ಸಹಾಯಕರು, 200 ಜಾಗೃತದಳ ಸಿಬ್ಬಂದಿ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಕೊರೋನಾ ಕಾರಣದಿಂದ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಲಾಗಿತ್ತು. ಈಗ ನೇಮಕಾತಿ ಪ್ರಕ್ರಿಯೆಗೆ ಮರು ಚಾಲನೆ ನೀಡಲು ಸರ್ಕಾರದ ಅನುಮತಿ ಕೋರಲಾಗಿದೆ. ವಿವರಗಳಿಗೆ www.ksrtcjobs.karnataka.gov.in ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...