ಬೆಂಗಳೂರು: ಆರನೇ ವೇತನ ಆಯೋಗದ ಶಿಫಾರಸುಗಳನ್ನು ತಮ್ಮ ವೇತನಕ್ಕೆ ಪರಿಗಣಿಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಇತ್ತೀಚೆಗೆ ಮುಷ್ಕರ ಕೈಗೊಂಡಿದ್ದರು.
ಮುಷ್ಕರದ ನಂತರ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ಸಾರಿಗೆ ಸಂಸ್ಥೆ ನಿಗಮಗಳಿಂದ ವೇತನ ಹೆಚ್ಚಳದಿಂದ ಆಗುವ ಆರ್ಥಿಕ ಹೊರೆ ಲೆಕ್ಕಾಚಾರ ಹಾಕಲು ಕ್ರಮಕೈಗೊಳ್ಳಲಾಗಿದೆ. ಈ ಕುರಿತಾಗಿ ಚರ್ಚೆ ನಡೆಸಲು ಡಿಸೆಂಬರ್ 29 ರಂದು ಸಭೆ ನಡೆಸಲಾಗುತ್ತಿದೆ.
ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಹೇಳಿದ್ದು, ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ವೇತನ ಹೆಚ್ಚಳ ಮತ್ತು ಉಂಟಾಗುವ ಪರಿಣಾಮಗಳ ಕುರಿತು ಪರಿಶೀಲನೆ ನಡೆಸಲಿದ್ದು, ಹಣಕಾಸು ಸಲಹೆಗಾರರು, ನಿಗಮಗಳ ಮುಖ್ಯ ಲೆಕ್ಕಾಧಿಕಾರಿಗಳಿಗೆ ಮಾಹಿತಿ ನೀಡಲು ಕೋರಲಾಗಿದೆ.