ಬೆಂಗಳೂರು: ಸಾರಿಗೆ ನೌಕರರಿಗೆ ಬಂಪರ್ ವೇತನ ಹೆಚ್ಚಳ ಕೊಡುಗೆ ನೀಡುವ ಸಾಧ್ಯತೆಯಿದೆ. 6ನೇ ವೇತನ ಆಯೋಗ ಅನ್ವಯ ವೇತನ ಹೆಚ್ಚಳ ಬೇಡಿಕೆಗೆ ಅನುಗುಣವಾಗಿ ಹೆಚ್ಚಳ ಮಾಡುವ ಸಾಧ್ಯತೆ ಇದೆ.
ಏಪ್ರಿಲ್ 7 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಾರಿಗೆ ನೌಕರರ ತೀರ್ಮಾನ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ವೇತನ ಹೆಚ್ಚಳ ಕುರಿತಂತೆ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಅಧಿಕಾರಿಗಳು ಸಭೆ ನಡೆಸಿ ವೇತನ ಹೆಚ್ಚಳದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ.
ಶೇಕಡ 15 ರಿಂದ ಶೇಕಡ 18 ರಷ್ಟು ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 4 ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡಬೇಕಿದ್ದು, 2020 ರ ಜನವರಿಯಿಂದ ಪರಿಷ್ಕರಣೆ ಆಗಬೇಕಿದ್ದ ವೇತನವನ್ನು ಪರಿಷ್ಕರಣೆ ಮಾಡಿಲ್ಲ. ಕಳೆದ ಸಲ ಶೇಕಡ 12.5 ರಷ್ಟು ವೇತನ ಏರಿಕೆ ಮಾಡಲಾಗಿದ್ದು, ಕೊರೋನಾ ಸೇರಿ ಹಲವು ಕಾರಣದಿಂದ ವೇತನ ಪರಿಷ್ಕರಣೆ ಮಾಡಿಲ್ಲ. ಇಂದು ವೇತನ ಹೆಚ್ಚಳದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.