ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ಸಂಬಳಕ್ಕಾಗಿ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರದ ವತಿಯಿಂದ 60.82 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.
ಜುಲೈ ತಿಂಗಳ ಶೇಕಡ 25 ರಷ್ಟು ಸಂಬಳಕ್ಕಾಗಿ ಹಣ ಬಿಡುಗಡೆ ಮಾಡಲಾಗಿದೆ. ಕೆಎಸ್ಆರ್ಟಿಸಿ 27.74 ಕೋಟಿ ರೂ., ವಾಯುವ್ಯ ಕರ್ನಾಟಕ 17.48 ಕೋಟಿ ರೂ., ಕಲ್ಯಾಣ ಕರ್ನಾಟಕ ಸಾರಿಗೆ ನೌಕರರಿಗೆ 15.61 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಸತ್ಯವತಿ ಅವರು ಆದೇಶ ಹೊರಡಿಸಿದ್ದಾರೆನ್ನಲಾಗಿದೆ.
ಆದರೆ, ಪೂರ್ಣ ಪ್ರಮಾಣದಲ್ಲಿ ವೇತನಕ್ಕಾಗಿ ಹಣ ಬಿಡುಗಡೆ ಮಾಡದಿರುವುದು ಮೊದಲೇ ಸಂಕಷ್ಟದಲ್ಲಿರುವ ನೌಕರರಿಗೆ ನುಂಗಲಾರದ ತುತ್ತಾಗಿದೆ. ಬಾಕಿ ಸೇರಿ ಪೂರ್ಣ ವೇತನ ಬಿಡುಗಡೆ ಮಾಡಬೇಕೆಂಬ ಒತ್ತಾಯ ಕೇಳಿ ಬಂದಿದೆ.