ದಾವಣಗೆರೆ: ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗೆ ಕೆ.ಎಸ್.ಆರ್.ಟಿ.ಸಿ. ಬಸ್‍ಗಳಲ್ಲಿ ಶೇ.25 ರಷ್ಟು ಪ್ರಯಾಣದರ ಸೌಲಭ್ಯವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿತ್ತು. ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಇವರ ಪತ್ರದನ್ವಯ ಈ ಸೌಲಭ್ಯವನ್ನು ಪುನಃ ಮುಂದುವರೆಸಬಹುದಾಗಿದೆ.
ಹಿರಿಯ ನಾಗರಿಕರು ಶೇ.25 ರ ರಿಯಾಯಿತಿ ಸೌಲಭ್ಯವನ್ನು ಕೆ.ಎಸ್.ಆರ್.ಟಿ.ಸಿ. ಬಸ್‍ಗಳಲ್ಲಿ ಪಡೆದುಕೊಳ್ಳಬಹುದೆಂದು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.