alex Certify ಕಾರ್ಮಿಕರಿಗೆ ಮತ್ತೊಂದು ಗುಡ್ ನ್ಯೂಸ್: ಉಚಿತ ಸಾರಿಗೆ ಸೌಲಭ್ಯಕ್ಕೆ ಬಸ್ ಪಾಸ್ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ಮಿಕರಿಗೆ ಮತ್ತೊಂದು ಗುಡ್ ನ್ಯೂಸ್: ಉಚಿತ ಸಾರಿಗೆ ಸೌಲಭ್ಯಕ್ಕೆ ಬಸ್ ಪಾಸ್ ವಿತರಣೆ

ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಬಸ್ ಪಾಸ್ ವಿತರಿಸಲಾಗುತ್ತದೆ. ನೋಂದಾಯಿತ ಕಾರ್ಮಿಕರಿಗೆ ಯೋಜನೆಯ ಲಾಭ ಸಿಗಲಿದೆ.

ನೋಂದಾಯಿತ ಕಾರ್ಮಿಕರು ಕೆಲಸದ ಸ್ಥಳಗಳಿಗೆ ತೆರಳಲು ಅನುಕೂಲವಾಗುವಂತೆ ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಸಂಚರಿಸಲು ಬಸ್ ಪಾಸ್ ವಿತರಿಸಲಾಗಿದೆ. ರಾಜ್ಯಾದ್ಯಂತ ಇದನ್ನು ವಿಸ್ತರಿಸಲು ನಿರ್ಧರಿಸಿದ್ದು, ಶೀಘ್ರದಲ್ಲೇ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹೇಳಿದ್ದಾರೆ.

ಕಾರ್ಮಿಕ ಇಲಾಖೆ ಮತ್ತು ಕೆಎಸ್ಆರ್ಟಿಸಿ ನಡುವೆ ಯೋಜನೆಯ ವ್ಯಾಪ್ತಿ, ಉಚಿತ ಪಾಸ್ ವಿತರಣೆ, ದೂರದ ಮಿತಿ ಮೊದಲಾದವುಗಳ ಬಗ್ಗೆ ಚರ್ಚೆ ನಡೆಯುತ್ತಿದ್ದು, ಶೀಘ್ರವೇ ರಾಜ್ಯದ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು. ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...