ಬೆಂಗಳೂರು: ಹಬ್ಬಗಳು, ಸಾಲು ಸಾಲು ರಜೆಯ ಸಂದರ್ಭದಲ್ಲಿ ಖಾಸಗಿ ಬಸ್ ಗಳು ಪ್ರಯಾಣಿಕರಿಂದ ಹೆಚ್ಚಿನ ಟಿಕೆಟ್ ದರ ವಸೂಲಿ ಮಾಡುವುದಕ್ಕೆ ಕಡಿವಾಣ ಹಾಕುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.
ಖಾಸಗಿ ಬಸ್ ಗಳಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಅಂತಹ ಖಾಸಗಿ ಬಸ್ ಗಳ ದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಸಾರಿಗೆ ಸಂಸ್ಥೆಗಳಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ವೈ.ಎಂ. ಸತೀಶ್ ಪ್ರಶ್ನೆಗೆ ಉತ್ತರಿಸಿದ್ದಾರೆ.