alex Certify BIG BREAKING: ಸಾರಿಗೆ ನೌಕರರ ಹೋರಾಟಕ್ಕೆ ಮಣಿದ ಸರ್ಕಾರ..? ಬೇಡಿಕೆಗಳ ಈಡೇರಿಕೆಗೆ ನಾಳೆ ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಾರಿಗೆ ನೌಕರರ ಹೋರಾಟಕ್ಕೆ ಮಣಿದ ಸರ್ಕಾರ..? ಬೇಡಿಕೆಗಳ ಈಡೇರಿಕೆಗೆ ನಾಳೆ ಮಹತ್ವದ ಸಭೆ

 ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸಾರಿಗೆ ಸಂಸ್ಥೆಗಳ ಸಿಬ್ಬಂದಿ ನಡೆಸುತ್ತಿರುವ ಹೋರಾಟ ಮುಂದುವರಿದಿದೆ.

ಈ ನಡುವೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಮೊದಲಾದವರು ಸಭೆ ನಡೆಸಿ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

ನಾಳೆ ಬೆಳಗ್ಗೆ 10 ಗಂಟೆಗೆ ವಿಕಾಸಸೌಧದ ಸಾರಿಗೆ ಸಚಿವರ ಕಚೇರಿಯಲ್ಲಿ ಹೋರಾಟ ನಿರತ ಸಾರಿಗೆ ಸಂಸ್ಥೆಗಳ ಪ್ರಮುಖರೊಂದಿಗೆ ಸಭೆ ನಡೆಸಲಾಗುವುದು. 10 ಗಂಟೆಗೆ ಟ್ರೇಡ್ ಯೂನಿಯನ್ ಸದಸ್ಯರ ಸಭೆ ನಡೆಸಿ ಹಣಕಾಸು ಇತಿಮಿತಿಯಲ್ಲಿ ಅವರ ಬೇಡಿಕೆಗಳನ್ನು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

ಸಿಎಂ ಜೊತೆಗಿನ ಸಭೆ ಮುಗಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಕ್ಷ್ಮಣ ಸವದಿ ಅವರು, ನಾಳೆ ಸಭೆ ನಡೆಸಿ ವಿವಾದ ಇತ್ಯರ್ಥಕ್ಕೆ ಪ್ರಯತ್ನಿಸುತ್ತೇವೆ. ಹಣಕಾಸು ಇತಿಮಿತಿ ನೋಡಿಕೊಂಡು ಅವರ ಬೇಡಿಕೆಗಳನ್ನು ಈಡೇರಿಸುತ್ತೇವೆ. ನಮ್ಮ ನೌಕರರ ಮೇಲೆ ನಮಗೆ ವಿಶ್ವಾಸವಿದೆ. ನಾವೆಲ್ಲರೂ ಒಟ್ಟಿಗೆ ಸಾರ್ವಜನಿಕರ ಸೇವೆಗೆ ಸಿದ್ಧವಾಗಿದ್ದೇವೆ. ನಾಳೆ ಎಲ್ಲ ಸಮಸ್ಯೆಗಳು ಬಗೆಹರಿಯುವ ವಿಶ್ವಾಸ ನಮಗಿದೆ ಎಂದು ತಿಳಿಸಿದ್ದಾರೆ.

ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಸರ್ಕಾರಿ ನೌಕರರಿಗಿಂತಲೂ ಉತ್ತಮವಾದ ಸೌಲಭ್ಯ ಕಲ್ಪಿಸಲು ಬದ್ಧರಾಗಿದ್ದು, ಅವರ ಬೇಡಿಕೆ ಈಡೇರಿಸುವ ಕುರಿತು ನಾಳಿನ ಸಭೆಯಲ್ಲಿ ಚರ್ಚೆಗೆ ಸಿದ್ಧವಾಗಿದ್ದೇವೆ. ಟ್ರೇಡ್ ಯೂನಿಯನ್ ಸದಸ್ಯರ ಜೊತೆ ಸಭೆ ನಡೆಸಲಿದ್ದು, ಈಗಾಗಲೇ ಫೋನ್ ಮೂಲಕ ಪ್ರಮುಖರನ್ನು ಸಂಪರ್ಕಿಸಿ ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...