
ಬೆಂಗಳೂರು: ರಾಜ್ಯದಲ್ಲಿ 4 ನಿಗಮಗಳ ಸಾರಿಗೆ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ ಅನೇಕ ಬಸ್ ನಿಲ್ದಾಣಗಳಲ್ಲಿ ಬಸ್ ಗಳು ನಿಂತಲ್ಲೇ ನಿಂತಿವೆ.
ಕೆಎಸ್ಸಾರ್ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ್ಯ ಸಾರಿಗೆ ಸಂಸ್ಥೆಯ ಬಸ್ ಗಳು ಡಿಪೋದಲ್ಲಿ ನಿಂತಿವೆ. ಅನೇಕ ರೂಟ್ ಗಳಲ್ಲಿ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಅನೇಕ ಕಡೆಗಳಲ್ಲಿ ಫಸ್ಟ್ ಶಿಫ್ಟ್ ಬಸ್ ಸಂಚಾರ ಆರಂಭವಾಗಿಲ್ಲ.
ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗಳ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಗಿದೆ. ತಮ್ಮನ್ನು ಸಾರಿಗೆ ನೌಕರರು ಎಂದು ಪರಿಗಣಿಸುವಂತೆ ಒತ್ತಾಯಿಸಿ ನೌಕರರು ಮುಷ್ಕರ ಕೈಗೊಂಡಿದ್ದಾರೆ. ಬೆಂಗಳೂರಿನ ಯಶವಂತಪುರ, ಬನಶಂಕರಿ ಸೇರಿದಂತೆ ಹಲವು ಕಡೆಗಳಲ್ಲಿ ಬಸ್ ಸಂಚಾರ ಸ್ಥಗಿತವಾಗಿ ಪ್ರಯಾಣಿಕರಿಗೆ ತೊಂದರೆಯಾಗಿದೆ. ಅದೇ ರೀತಿ ರಾಜ್ಯದ ಹಲವೆಡೆ ಬಸ್ ಸಂಚಾರ ಸ್ಥಗಿತವಾಗಿದೆ.