alex Certify ಬಸ್ ಪ್ರಯಾಣಿಕರಿಗೆ ಮುಖ್ಯ ಮಾಹಿತಿ: ತೀವ್ರ ಸ್ವರೂಪ ಪಡೆದ ಸಾರಿಗೆ ನೌಕರರ ಮುಷ್ಕರ – ಬಸ್ ಸಂಚಾರದಲ್ಲಿ ವ್ಯತ್ಯಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪ್ರಯಾಣಿಕರಿಗೆ ಮುಖ್ಯ ಮಾಹಿತಿ: ತೀವ್ರ ಸ್ವರೂಪ ಪಡೆದ ಸಾರಿಗೆ ನೌಕರರ ಮುಷ್ಕರ – ಬಸ್ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ರಾಜ್ಯದಲ್ಲಿ 4 ನಿಗಮಗಳ ಸಾರಿಗೆ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ ಅನೇಕ ಬಸ್ ನಿಲ್ದಾಣಗಳಲ್ಲಿ ಬಸ್ ಗಳು ನಿಂತಲ್ಲೇ ನಿಂತಿವೆ.

ಕೆಎಸ್ಸಾರ್ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ್ಯ ಸಾರಿಗೆ ಸಂಸ್ಥೆಯ ಬಸ್ ಗಳು ಡಿಪೋದಲ್ಲಿ ನಿಂತಿವೆ. ಅನೇಕ ರೂಟ್ ಗಳಲ್ಲಿ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಅನೇಕ ಕಡೆಗಳಲ್ಲಿ ಫಸ್ಟ್ ಶಿಫ್ಟ್ ಬಸ್ ಸಂಚಾರ ಆರಂಭವಾಗಿಲ್ಲ.

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗಳ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಗಿದೆ. ತಮ್ಮನ್ನು ಸಾರಿಗೆ ನೌಕರರು ಎಂದು ಪರಿಗಣಿಸುವಂತೆ ಒತ್ತಾಯಿಸಿ ನೌಕರರು ಮುಷ್ಕರ ಕೈಗೊಂಡಿದ್ದಾರೆ. ಬೆಂಗಳೂರಿನ ಯಶವಂತಪುರ, ಬನಶಂಕರಿ ಸೇರಿದಂತೆ ಹಲವು ಕಡೆಗಳಲ್ಲಿ ಬಸ್ ಸಂಚಾರ ಸ್ಥಗಿತವಾಗಿ ಪ್ರಯಾಣಿಕರಿಗೆ ತೊಂದರೆಯಾಗಿದೆ. ಅದೇ ರೀತಿ ರಾಜ್ಯದ ಹಲವೆಡೆ ಬಸ್ ಸಂಚಾರ ಸ್ಥಗಿತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...