alex Certify ಭುಗಿಲೆದ್ದ ಸಾರಿಗೆ ನೌಕರರ ಮುಷ್ಕರ; ಪ್ರಯಾಣಿಕರ ಆಕ್ರೋಶ – KSRTC ಬಸ್ ಗಳ ಮೇಲೆ ಕಲ್ಲು ತೂರಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭುಗಿಲೆದ್ದ ಸಾರಿಗೆ ನೌಕರರ ಮುಷ್ಕರ; ಪ್ರಯಾಣಿಕರ ಆಕ್ರೋಶ – KSRTC ಬಸ್ ಗಳ ಮೇಲೆ ಕಲ್ಲು ತೂರಾಟ

ಕಲಬುರಗಿ: ಸಾರಿಗೆ ನೌಕರರ ಮುಷ್ಕರ ಭುಗಿಲೆದ್ದ ಬೆನ್ನಲ್ಲೇ ಬಸ್ ಸಂಚಾರಗಳಿಲ್ಲದೇ ಪರದಾಡುತ್ತಿರುವ ಸಾರ್ವಜನಿಕರ ಆಕ್ರೋಶ ಕೂಡ ತೀವ್ರಗೊಂಡಿದ್ದು, ಈ ನಡುವೆ ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಮೇಲೆ ಕಲ್ಲುತೂರಾಟ ನಡೆಸಿರುವ ಘಟನೆ ನಡೆದಿದೆ.

ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ, ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಸಂಪೂರ್ಣ ಸ್ತಬ್ಧಗೊಂಡಿದ್ದು, ಕೆಲ ಜಿಲ್ಲೆಗಳಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ವಿರಳವಾಗಿ ಓಡಾಡುತ್ತಿವೆ. ಈ ನಡುವೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಕಲ್ಲು ತೂರಾಟ ನಡೆಸಿರುವ ಘಟನೆ ಕಲಬುರಗಿ ಜಿಲ್ಲೆಯ ಕೋರ್ಟ್ ಬಳಿ ನಡೆದಿದೆ.

ಗಾಣಗಾಪುರದಿಂದ ಕಲಬುರಗಿ ನಗರಕ್ಕೆ ಬರುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬಸ್ ನ ಗಾಜುಗಳು ಪುಡಿ ಪುಡಿಯಾಗಿವೆ. ಇನ್ನೊಂದೆಡೆ ಬೆಂಗಳೂರಿನ ನೆಲಮಂಗಲ ಬಳಿ ಕೂಡ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಕಲ್ಲು ತೂರಾಟ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...