
ಬೆಂಗಳೂರು: ಮುಷ್ಕರದ ಸಂದರ್ಭದಲ್ಲಿ ಸೇವೆಯಿಂದ ವಜಾಗೊಂಡ ಸಾರಿಗೆ ನೌಕರರನ್ನು ಪುನರ್ ನೇಮಕಾತಿ ಮಾಡಿಕೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಸೋಮವಾರ ಪ್ರತಿಭಟನೆ ಕೈಗೊಂಡಿದ್ದಾರೆ.
ಸಿಐಟಿಯು ಸಂಯೋಜಿತ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಒಕ್ಕೂಟದ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಿಂದ ಬಸ್ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ.
ಅಧಿಕಾರಿಗಳ ದಬ್ಬಾಳಿಕೆ, ವೇತನ ತಾರತಮ್ಯ ವಿರೋಧಿಸಿ ಈ ಹಿಂದೆ ಮುಷ್ಕರ ನಡೆಸಲಾಗಿತ್ತು. ಆಗ ಕೆಲವು ನೌಕರರನ್ನು ವರ್ಗಾವಣೆ, ಅಮಾನತು, ವಜಾ ಮಾಡಲಾಗಿದೆ. ಇಂತಹ ನೌಕರರನ್ನು ಪುನರ್ ನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಇವತ್ತು ಪ್ರತಿಭಟನೆ ಕೈಗೊಳ್ಳಲಾಗಿದೆ.