ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯಿಂದ ಬಸ್, ಆಟೋ, ಕ್ಯಾಬ್ ಸೇರಿ ಖಾಸಗಿ ಸಾರಿಗೆ ಉದ್ಯಮ ತೊಂದರೆಗೆ ಒಳಗಾಗಿದ್ದು, ಪರಿಹಾರಕ್ಕೆ ಒತ್ತಾಯಿಸಿ ಸೆಪ್ಟೆಂಬರ್ 11ರಂದು ಖಾಸಗಿ ಸಾರಿಗೆ ಸಂಘಟನೆಗಳು ಬೆಂಗಳೂರಿನಲ್ಲಿ ಸಾರಿಗೆ ಬಂದ್ ನಡೆಸಲಿವೆ.
ಇದೇ ವೇಳೆ ಬಿಎಂಟಿಸಿ, ಕೆಎಸ್ಆರ್ಟಿಸಿ ನೌಕರರು ಕೂಡ ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದಾರೆ. ಹಿರಿಯ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳ ತಪ್ಪಿಸಬೇಕು. 2022ರ ಜನವರಿಯಿಂದ 23ರ ಫೆಬ್ರವರಿ ಅವಧಿಯಲ್ಲಿ ವೇತನ ಹೆಚ್ಚಳದ ಬಾಕಿ ಮೊತ್ತ ಕೂಡಲೇ ಪಾವತಿಸಬೇಕು. ಬಿಎಂಟಿಸಿ ನೌಕರರಿಗೆ ಬೋನಸ್ ಕಾಯ್ದೆ ಪ್ರಕಾರ ನೀಡಬೇಕಾದ ಶೇಕಡ 8.33 ರಷ್ಟು ಬೋನಸ್ ಕೂಡಲೇ ಬಿಡುಗಡೆ ಮಾಡಬೇಕೆಂದು ನೌಕರರು ಆಗ್ರಹಿಸಿದ್ದಾರೆ.
ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕೆಎಸ್ಆರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಯೂನಿಯನ್ ಚರ್ಚೆ ನಡೆಸಿದೆ. ಬೇಡಿಕೆ ಈಡೇರಿಸಲು ಮನವಿ ಮಾಡಲಾಗಿದ್ದು, ಬೇಡಿಕೆಗೆ ಸ್ಪಂದಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಲಾಗಿದೆ.