ಬೆಂಗಳೂರು: ಮುಷ್ಕರನಿರತ ನೌಕರರ ಮೇಲೆ ಬಿಎಂಟಿಸಿ ಶಿಸ್ತು ಕ್ರಮ ಕೈಗೊಂಡಿದೆ. 271 ಚಾಲಕರು ಮತ್ತು ನಿರ್ವಾಹಕರನ್ನು ಅಮಾನತು ಮಾಡಲಾಗಿದೆ.
ಕರ್ತವ್ಯಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಚಾಲಕರು ಮತ್ತು ನಿರ್ವಾಹಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕಳೆದ 8 ದಿನದಲ್ಲಿ 495 ನೌಕರರ ಮೇಲೆ ಶಿಸ್ತಿನ ಅಸ್ತ್ರ ಪ್ರಯೋಗಿಸಲಾಗಿದೆ. ಸಾರಿಗೆ ನೌಕರರ ಮುಷ್ಕರ 9 ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಂಜೆ ಮೇಣದಬತ್ತಿ ಹಿಡಿದು ಪ್ರತಿಭಟನೆ ನಡೆಸಲಾಗುವುದು.
ಸಾರಿಗೆ ನೌಕರರ ಮುಷ್ಕರವನ್ನು ಹತ್ತಿಕ್ಕುವ ಉದ್ದೇಶದಿಂದ ಸರ್ಕಾರ ಎಸ್ಮಾ ಮತ್ತು ಕೆಸ್ಮಾ ಕಾಯ್ದೆಯ ವಿವಿಧ ಸೆಕ್ಷನ್ ಗಳನ್ನು ಪ್ರಯೋಗಿಸಿದೆ. ಕರ್ತವ್ಯಕ್ಕೆ ಹಾಜರಾದ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಮತ್ತು ಬಸ್ ಗಳ ಮೇಲೆ ಕಲ್ಲು ತೂರಾಟ ಮಾಡುವವರ ಮೇಲೆ ಕಠಿಣ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ.