ಬೆಂಗಳೂರು: ಆರನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ನಾಳೆಯಿಂದ ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ 4 ನಿಗಮಗಳ ಬಸ್ ಸಂಚಾರ ಬಂದ್ ಆಗಲಿದೆ. ಪ್ರಯಾಣಿಕರಿಗೆ ಮುಷ್ಕರದ ಬಿಸಿ ತಟ್ಟಲಿದೆ.
ಏಪ್ರಿಲ್ 7 ರಿಂದ ಮುಷ್ಕರ ಕೈಗೊಳ್ಳುವುದಾಗಿ ಸಾರಿಗೆ ನೌಕರರು ಹೇಳಿದ್ದಾರೆ. ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ವೇತನ ಹೆಚ್ಚಳದ ಭರವಸೆ ನೀಡಿದ್ದು, ಚುನಾವಣೆ ನೀತಿ ಸಂಹಿತೆ ಕಾರಣ ನೀಡಿದ್ದಾರೆ. ಸದ್ಯಕ್ಕೆ ಮುಷ್ಕರ ನಡೆಸಬಾರದು ಎಂದು ಮನವಿ ಮಾಡಿದ್ದಾರೆ.
ರಸ್ತೆ ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷರಾದ ಆರ್. ಚಂದ್ರಶೇಖರ್ ಅವರು ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ನಾಳೆಯಿಂದ ಬಸ್ ಸಂಚಾರ ಬಂದ್ ಆದಲ್ಲಿ ಪ್ರಯಾಣಿಕರಿಗೆ ಮುಷ್ಕರದ ಬಿಸಿ ತಟ್ಟಲಿದೆ.