ಬೆಂಗಳೂರು: ಸಾರಿಗೆ ನೌಕರರ ಬೇಡಿಕೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಮಿತಿಯನ್ನು ರಚನೆ ಮಾಡಲಾಗಿದೆ.
ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಮಿತಿ ರಚಿಸಲಾಗಿದ್ದು, ಸಮಿತಿ ಅಧ್ಯಕ್ಷರಾಗಿ ಕೆಎಸ್ಆರ್ಟಿಸಿ ಎಂಡಿ ಅವರನ್ನು ನೇಮಕ ಮಾಡಲಾಗಿದೆ. ಸಮಿತಿಯ ಸದಸ್ಯರಾಗಿ ಬಿಎಂಟಿಸಿ, ಈಶಾನ್ಯ ಕರ್ನಾಟಕ, ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಎಂಡಿಗಳನ್ನು ನೇಮಕ ಮಾಡಲಾಗಿದ್ದು, ಕಾರ್ಯದರ್ಶಿಯಾಗಿ ಕೆಎಸ್ಆರ್ಟಿಸಿ ಸದಸ್ಯರ ನೇಮಕ ಮಾಡಲಾಗಿದೆ. ನಿಗಮದ ನೌಕರರಿಗೆ ಆರೋಗ್ಯ ಭಾಗ್ಯ ಯೋಜನೆ ಜಾರಿ, ಅಂತರ ನಿಗಮ ವರ್ಗಾವಣೆಯ ಬಗ್ಗೆ ಸಮಿತಿ ರಚನೆಗೆ ಕ್ರಮ, ನೌಕರರಿಗೆ ಕಿರುಕುಳ ತಡೆಯಲು ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ ಎಂದು ಹೇಳಲಾಗಿದೆ.
ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಮುಷ್ಕರ ಕೈಗೊಂಡಿದ್ದು, ಅವರ ಬೇಡಿಕೆಗೆ ಸರ್ಕಾರ ಸ್ಪಂದಿಸಿ ಸರ್ಕಾರಿ ನೌಕರರರನ್ನಾಗಿ ನೇಮಕ ಮಾಡಿಕೊಳ್ಳುವುದರ ಹೊರತಾಗಿ ಉಳಿದ ಎಲ್ಲ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಲಾಗಿದೆ ಎನ್ನಲಾಗಿದೆ.