![](https://kannadadunia.com/wp-content/uploads/2022/05/KSRTC.jpg)
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗದಲ್ಲಿ ತಾಂತ್ರಿಕ ಸಹಾಯಕ ಹುದ್ದೆಗಳ ದಾಖಲಾತಿ ಪರಿಶೀಲನೆಗೆ ಗೈರುಹಾಜರಾದ ಅಭ್ಯರ್ಥಿಗಳಿಗೆ ಅಂತಿಮ ಅವಕಾಶ ನೀಡಲಾಗಿದೆ.
ಕರಾರಸಾ ನಿಗಮದಲ್ಲಿ ಜಾಹೀರಾತು ಸಂ.1/2018 ದಿನಾಂಕ:17-03-2018 ರನ್ವಯ ತಾಂತ್ರಿಕ ಸಹಾಯಕ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಗೆ ಮೂಲ ದಾಖಲಾತಿ ಹಾಗೂ ದೇಹದಾರ್ಡ್ಯತೆ ಪರಿಶೀಲಿಸಲು ದಿನಾಂಕ: 26-12-2023 ರಿಂದ ದಿನಾಂಕ: 28-12-2023 ರವರೆಗೆ ಅವಕಾಶ ನೀಡಲಾಗಿತ್ತು.
ಆದರೆ, ಕೆಲವೊಂದು ಅಭ್ಯರ್ಥಿಗಳು ಗೈರುಹಾಜರಾಗಿರುವ ಹಿನ್ನಲೆಯಲ್ಲಿ ಅಂತಿಮ ಅವಕಾಶವಾಗಿ ಗೈರುಹಾಜರಾದ ಅಭ್ಯರ್ಥಿಗಳಿಗೆ ದಿನಾಂಕ: 03-01-2024 ರಂದು ಕಛೇರಿ ವೇಳೆಯಲ್ಲಿ ಕರಾರಸಾ ನಿಗಮದ ಕೇಂದ್ರ ಕಚೇರಿಯ ಸಭಾಂಗಣ, ಶಾಂತಿನಗರ, ಬೆಂಗಳೂರು ಇಲ್ಲಿ ದಾಖಲಾತಿ / ದೇಹದಾರ್ಡ್ಯತೆ ಪರಿಶೀಲಿಸಲು ನಿರ್ಧರಿಸಲಾಗಿದೆ.
ಈ ಕುರಿತು ಗೈರುಹಾಜರಾದ ಅಭ್ಯರ್ಥಿಗಳ ಮೊಬೈಲ್ ಸಂಖ್ಯೆಗೆ SMS ಮೂಲಕ ತಿಳಿಸಲಾಗಿದೆ. ಗೈರುಹಾಜರಾದ ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್-ಸೈಟ್ ಆದ ksrtcjobs.com ರಲ್ಲಿ ಕರೆಪತ್ರ ಡೌನ್-ಲೋಡ್ ಮಾಡಿಕೊಂಡು ಕರೆಪತ್ರದಲ್ಲಿ ನಮೂದಿಸಿರುವ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ನಿಗಧಿತ ದಿನಾಂಕದಂದು ತಪ್ಪದೇ ಹಾಜರಾಗಲು ಸೂಚಿಸಲಾಗಿದೆ.
![](https://kannadadunia.com/wp-content/uploads/2023/12/ksrtc-1.jpg)