alex Certify ʻKSRTCʼ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿ : ದಾಖಲಾತಿ ಪರಿಶೀಲನೆಗೆ ಗೈರುಹಾಜರಾದವರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʻKSRTCʼ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿ : ದಾಖಲಾತಿ ಪರಿಶೀಲನೆಗೆ ಗೈರುಹಾಜರಾದವರಿಗೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗದಲ್ಲಿ ತಾಂತ್ರಿಕ ಸಹಾಯಕ ಹುದ್ದೆಗಳ ದಾಖಲಾತಿ ಪರಿಶೀಲನೆಗೆ ಗೈರುಹಾಜರಾದ ಅಭ್ಯರ್ಥಿಗಳಿಗೆ ಅಂತಿಮ ಅವಕಾಶ ನೀಡಲಾಗಿದೆ. 

ಕರಾರಸಾ ನಿಗಮದಲ್ಲಿ ಜಾಹೀರಾತು ಸಂ.1/2018 ದಿನಾಂಕ:17-03-2018 ರನ್ವಯ ತಾಂತ್ರಿಕ ಸಹಾಯಕ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಗೆ ಮೂಲ ದಾಖಲಾತಿ ಹಾಗೂ ದೇಹದಾರ್ಡ್ಯತೆ ಪರಿಶೀಲಿಸಲು ದಿನಾಂಕ: 26-12-2023 ರಿಂದ ದಿನಾಂಕ: 28-12-2023 ರವರೆಗೆ ಅವಕಾಶ ನೀಡಲಾಗಿತ್ತು.

ಆದರೆ, ಕೆಲವೊಂದು ಅಭ್ಯರ್ಥಿಗಳು ಗೈರುಹಾಜರಾಗಿರುವ ಹಿನ್ನಲೆಯಲ್ಲಿ ಅಂತಿಮ ಅವಕಾಶವಾಗಿ ಗೈರುಹಾಜರಾದ ಅಭ್ಯರ್ಥಿಗಳಿಗೆ ದಿನಾಂಕ: 03-01-2024 ರಂದು ಕಛೇರಿ ವೇಳೆಯಲ್ಲಿ ಕರಾರಸಾ ನಿಗಮದ ಕೇಂದ್ರ ಕಚೇರಿಯ ಸಭಾಂಗಣ, ಶಾಂತಿನಗರ, ಬೆಂಗಳೂರು ಇಲ್ಲಿ ದಾಖಲಾತಿ / ದೇಹದಾರ್ಡ್ಯತೆ ಪರಿಶೀಲಿಸಲು ನಿರ್ಧರಿಸಲಾಗಿದೆ.

ಈ ಕುರಿತು ಗೈರುಹಾಜರಾದ ಅಭ್ಯರ್ಥಿಗಳ ಮೊಬೈಲ್ ಸಂಖ್ಯೆಗೆ SMS ಮೂಲಕ ತಿಳಿಸಲಾಗಿದೆ. ಗೈರುಹಾಜರಾದ ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್-ಸೈಟ್ ಆದ ksrtcjobs.com ರಲ್ಲಿ ಕರೆಪತ್ರ ಡೌನ್-ಲೋಡ್ ಮಾಡಿಕೊಂಡು ಕರೆಪತ್ರದಲ್ಲಿ ನಮೂದಿಸಿರುವ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ನಿಗಧಿತ ದಿನಾಂಕದಂದು ತಪ್ಪದೇ ಹಾಜರಾಗಲು ಸೂಚಿಸಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...