ಬೆಂಗಳೂರು: ಸಾರಿಗೆ ಬಸ್ ಗಳ ಟಿಕೆಟ್ ದರ ಹೆಚ್ಚಳಕ್ಕೆ ಕೆಎಸ್ಆರ್ಟಿಸಿ ಅಧ್ಯಕ್ಷ ಮತ್ತು ಶಾಸಕ ಗುಬ್ಬಿ ಶ್ರೀನಿವಾಸ್ ಪರೋಕ್ಷವಾಗಿ ಮನವಿ ಮಾಡಿದ್ದಾರೆ.
ರಾಜ್ಯ ರಸ್ತೆ ಸಾರಿಗೆ ನಿಗಮದ 63ನೇ ಸಂಸ್ಥಾಪನಾ ದಿನದ ಅಂಗವಾಗಿ ಶಾಂತಿನಗರ ಕೆಎಸ್ಆರ್ಟಿಸಿ ಕೇಂದ್ರೀಯ ವಿಭಾಗ ಘಟಕ 2ರಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವರೊಂದಿಗೆ ಪಾಲ್ಗೊಂಡಿದ್ದ ಎಸ್.ಆರ್. ಶ್ರೀನಿವಾಸ್ ಟಿಕೆಟ್ ದರ ಹೆಚ್ಚಳಕ್ಕೆ ಪರೋಕ್ಷವಾಗಿ ಮನವಿ ಮಾಡಿದ್ದಾರೆ.
ಕೆಎಸ್ಆರ್ಟಿಸಿ ದೇಶದಲ್ಲಿಯೇ ದೊಡ್ಡ ಸಾರಿಗೆ ಸಂಸ್ಥೆಯಾಗಿದೆ. ಕಾರ್ಮಿಕ ಆಧಾರಿತ ಸಂಸ್ಥೆ ಇದಾಗಿದ್ದು, ಕಾರ್ಮಿಕರ ಕಲ್ಯಾಣಕ್ಕೆ ಅನೇಕ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಆದರೂ ಇಂಧನ ಬೆಲೆ ಹೆಚ್ಚಳ ಸೇರಿ ಇತರೆ ಕಾರಣಗಳಿಂದ ನಿಗಮಗಳಿಗೆ ಆಗುವ ಹೊರೆ ಕಡಿಮೆ ಮಾಡಲು ಬಸ್ ಪ್ರಯಾಣ ದರ ಹೆಚ್ಚಳ ಮಾಡಬೇಕಿದೆ. ಆಗ ಕಾರ್ಮಿಕರಿಗೆ ಮತ್ತು ಪ್ರಯಾಣಿಕರಿಗೆ ಇನ್ನಷ್ಟು ಸೌಲಭ್ಯ ನೀಡಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವಂತೆ ಪರೋಕ್ಷವಾಗಿ ಶ್ರೀನಿವಾಸ್ ಮನವಿ ಮಾಡಿದ್ದಾರೆ.