ಬೆಂಗಳೂರು: ಕಳೆದ ನಾಲ್ಕೈದು ವರ್ಷಗಳಿಂದ ಬಸ್ ಪ್ರಯಾಣ ದರ ಹೆಚ್ಚಳ ಮಾಡಿಲ್ಲ. ಈ ನಿಟ್ಟಿನಲ್ಲಿ ಮುಂದೆ ಕ್ರಮ ಕೈಗೊಳ್ಳಬೇಕಾಗಿ ಬರಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಮುಂದೆ ಬಸ್ ಪ್ರಯಾಣದರ ಹೆಚ್ಚಳ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿ ಬರಬಹುದು ಎಂದು ಹೇಳುವ ಮೂಲಕ ಬಸ್ ಪ್ರಯಾಣದರ ಹೆಚ್ಚಳದ ಸುಳಿವು ನೀಡಿದ್ದಾರೆ.
ಶಕ್ತಿ ಯೋಜನೆಯಿಂದಾಗಿ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ. ಆದರೆ, ಬಿಎಂಟಿಸಿಯಲ್ಲಿ 10 ವರ್ಷಗಳಿಂದ ಪ್ರಯಾಣದರ ಏರಿಕೆ ಮಾಡಿಲ್ಲ. ಇತರೆ ನಿಗಮಗಳಲ್ಲಿ 2020ರ ನಂತರ ಈ ಪ್ರಕ್ರಿಯೆ ಕೈಗೊಂಡಿಲ್ಲವೆಂದು ತಿಳಿಸಿದ್ದಾರೆ.
ಮೊದಲು ಸಾರಿಗೆ ನೌಕರರಿಗೆ ವೇತನ ನೀಡಲು ಹಿಂದೆ ಮುಂದೆ ವೇತನ ಕೊಡುವ ಪರಿಸ್ಥಿತಿ ಇತ್ತು. ಈಗ ಶಕ್ತಿ ಯೋಜನೆಯಿಂದಾಗಿ ಪರಿಸ್ಥಿತಿ ಸುಧಾರಿಸಿದೆ ಎಂದು ಹೇಳಿದ್ದಾರೆ.