ಬೆಂಗಳೂರು: ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರ ಚಿಂತನೆ ನಡೆಸಿದ್ದು, ಶೇಕಡ 15 ರಿಂದ 20ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ತಿಳಿಸಿದ್ದಾರೆ.
ಆದರೆ, ಬಸ್ ಪ್ರಯಾಣ ದರ ಏರಿಕೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಕೆಎಸ್ಆರ್ಟಿಸಿ ಸೇರಿದಂತೆ ಎಲ್ಲಾ ನಾಲ್ಕು ನಿಗಮಗಳಲ್ಲಿ ಬಸ್ ಟಿಕೆಟ್ ದರ ಏರಿಕೆ ಸಂಬಂಧಪಟ್ಟ ರಾಜ್ಯ ಸರ್ಕಾರದ ಮುಂದೆ ಇನ್ನೂ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ. ಹಾಗಾಗಿ ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳದ ಉದ್ದೇಶವಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಬಸ್ ಟಿಕೆಟ್ ದರ ಹೆಚ್ಚಳ ಕುರಿತು ಸಾರಿಗೆ ನಿಗಮಗಳಿಂದ ಪ್ರಸ್ತಾವನೆ ಸಲ್ಲಿಕೆಯಾದ ಬಳಿಕ ತೀರ್ಮಾನಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.