ಬೆಂಗಳೂರು: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) 96 ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಆಯ್ಕೆಪಟ್ಟಿಯಿಂದ 96 ನೌಕರರನ್ನು ಬಿಡುಗಡೆಗೊಳಿಸಲಾಗಿದೆ. ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಕೈಗೊಂಡಿದ್ದಾರೆ. ತರಬೇತಿನಿರತ ನೌಕರರು ಸೇರಿದಂತೆ ಎಲ್ಲರಿಗೂ ಕರ್ತವ್ಯಕ್ಕೆ ಹಾಜರಾಗಲು ಸೂಚನೆ ನೀಡಲಾಗಿತ್ತು. ಆದರೆ, ಸೂಚನೆ ಪಾಲಿಸದ ಹಿನ್ನೆಲೆಯಲ್ಲಿ ತರಬೇತಿನಿರತ ಚಾಲಕರು, ನಿರ್ವಾಹಕರು, ಇತರೆ ಸಿಬ್ಬಂದಿ ಸೇರಿದಂತೆ 96 ಮಂದಿಯನ್ನು ಆಯ್ಕೆ ಪಟ್ಟಿಯಿಂದ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.