ಬೆಂಗಳೂರು: ರಾಜ್ಯ ಸಾರಿಗೆ ನಿಗಮಗಳ ಅಂತರ ನಿಗಮ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಲಾಗಿದೆ. ಏಪ್ರಿಲ್ 1 ರಿಂದ 30 ರ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ.
ಅರ್ಜಿಯನ್ನು ಕಡ್ಡಾಯವಾಗಿ ಆನ್ಲೈನ್ ಮೂಲಕ ಸಲ್ಲಿಸಬೇಕಿದ್ದು, ನಿಗದಿತ ನಮೂನೆಯಲ್ಲಿ ಸ್ಕ್ಯಾನ್ ಮಾಡಲಾದ ಸಹಿ ಮತ್ತು ಇತ್ತೀಚಿನ ಪಾಸ್ಪೋರ್ಟ್ ಭಾವಚಿತ್ರವನ್ನು ಅಪ್ಲೋಡ್ ಮಾಡಬೇಕಿದೆ. ಅರ್ಜಿ ಭರ್ತಿ ಮಾಡಿ ಸಲ್ಲಿಸಿದ ನಂತರ ಪ್ರಿಂಟ್ ತೆಗೆದುಕೊಂಡು ನಿಗದಿತ ಸ್ಥಳದಲ್ಲಿ ಸಹಿ ಮಾಡಬೇಕು. ಸಂಬಂಧಿಸಿದ ವಿಭಾಗದ ಸಹಾಯಕ ಆಡಳಿತಾಧಿಕಾರಿಗೆ ಅರ್ಜಿಯನ್ನು ಸಲ್ಲಿಸಿ ಸ್ವೀಕೃತಿ ಪಡೆಯಬೇಕು.
ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳಲ್ಲಿ ಅಂತರ ನಿಗಮ ವರ್ಗಾವಣೆ ಒಂದಾಗಿತ್ತು. ಆರನೇ ವೇತನ ಆಯೋಗದ ಶಿಫಾರಸು ಜಾರಿ ಹೊರತಾಗಿ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಕ್ರಮಕೈಗೊಳ್ಳಲಾಗಿದೆ. ವರ್ಗಾವಣೆ ಬಯಸುವ ನೌಕರರು ಮಾತೃ ನಿಗಮದಲ್ಲಿ ಪರೀಕ್ಷಾರ್ಥ ದಿನಾಂಕದಿಂದ ಕನಿಷ್ಠ 10 ವರ್ಷಗಳ ಕಾಲ ಸೇವೆ ಸಲ್ಲಿಸಿರಬೇಕು ಎಂದು ಹೇಳಲಾಗಿದೆ.